Thursday, November 6, 2025

ಎನ್‌ಐಎ ಹೆಗಲಿಗೆ ಧರ್ಮಸ್ಥಳ ಪ್ರಕರಣದ ತನಿಖೆ: ಏನಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್‌ಐಟಿಯೇ ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಹೇಳಿದ್ದಾರೆ.

ಈ ಮೂಲಕ ಪ್ರಕರಣದ ತನಿಖೆ ಎನ್‌ಐಎಗೆ ವಹಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದ ತನಿಖೆ ಎನ್‌ಐಎಗೆ ವಹಿಸುವಂತೆ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಎಸ್‌ಐಟಿ ಅಧಿಕಾರಿಗಳೂ ಪೊಲೀಸರೇ, ಎನ್‌ಐಎನಲ್ಲಿ ಇರುವವರೂ ಪೊಲೀಸರೇ ಎಂದು ಪ್ರತಿಕ್ರಿಯಿಸಿದರಲ್ಲದೆ, ಎಸ್‌ಐಟಿ ತನಿಖೆಯೇ ಮುಂದುವರೆಯುತ್ತದೆ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

error: Content is protected !!