Monday, August 8, 2022

Latest Posts

ಕೇರಳದ ಇಬ್ಬರು ಆರೋಗ್ಯ ಕಾರ್ಯಕರ್ತರಲ್ಲಿ ನಿಫಾ ವೈರಸ್ ಸೋಂಕು ಲಕ್ಷಣ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ಸಂಪರ್ಕಕ್ಕೆ ಒಳಗಾಗಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿವೆ.
ಈ ಬಗ್ಗೆ ರಾಜ್ಯ ಆರೋಗ್ಯ ಸಚಿವೆ ವೀಣಾ ಚಾರ್ಜ್ ಮಾತನಾಡಿದ್ದು, ಶನಿವಾರ ರಾತ್ರಿ ನಿಫಾ ಸೋಂಕಿನಿಂದ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಮಾದರಿಗಳಲ್ಲಿ ನಿಫಾ ವೈರಸ್ ಇರುವುದು ಪುಣೆಯ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ದೃಢಪಡಿಸಿದೆ ಎಂದಿದ್ದಾರೆ.
ಬಾಲಕನ ಸಂಪರ್ಕಕ್ಕೆ ಒಳಗಾಗಿರುವ 20 ಮಂದಿಯನ್ನು ಹೈ ರಿಸ್ಕ್ ವಿಭಾಗ ಎಂದು ಗುರುತಿಸಿ ಪ್ರತ್ಯೇಕಿಸಲಾಗಿದೆ. ಇವರನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದಿದ್ದಾರೆ.
ಇದುವರೆಗೆ ಬಾಲಕನ ಸಂಪರ್ಕಕ್ಕೆ ಒಳಗಾದ 188 ಮಂದಿಯನ್ನು ಪತ್ತೆ ಹಚ್ಚಿದ್ದು, ಅದರಲ್ಲಿ 20 ಮಂದಿಯನ್ನು ಹೈ ರಿಸ್ಕ್ ವಿಭಾಗದಲ್ಲಿ ಗುರುತಿಸಲಾಗಿದೆ.
ಇಬ್ಬರಲ್ಲಿ ರೋಗ ಲಕ್ಷಣಗಳು ಕಾಣಿಸಿದ್ದು, ಅವರಿಬ್ಬರೂ ಆರೋಗ್ಯ ಕಾರ್ಯಕರ್ತರು ಎನ್ನಲಾಗಿದೆ. ಬಾಲಕನ ಮನೆಯ ಮೂರು ಕಿ.ಮೀ ವ್ಯಾಪ್ತಿಯನ್ನು ಕಂಟೆನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss