ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ: ಕೋಯಿಕ್ಕೋಡ್ ನಲ್ಲಿ ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಾಗುತ್ತಿದ್ದು, ಐದು ಮಂದಿಗೆ ಸೋಂಕು ತಗುಲಿದೆ. ಕೋಯಿಕ್ಕೋಡ್‌ನಲ್ಲಿ ನಿಫಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶಾಲಾ ಕಾಲೇಜುಗಳಿಗೆ ಸೆ.24ರವರೆಗೆ ರಜೆ ಘೋಷಿಸಲಾಗಿದೆ.

ಈ ಮೊದಲು ಸೆ.14 ಹಾಗೂ 15ರಂದು ರಜೆ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು, ತದನಂತರ ಒಂದು ದಿನ ರಜೆಯನ್ನು ವಿಸ್ತರಿಸಲಾಗಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರಿಕೆ ಹಿನ್ನೆಲೆಯಲ್ಲಿ ಸೆ.24 ರವರೆಗೆ ರಜೆ ವಿಸ್ತರಿಸಲಾಗಿದೆ.

ಅಂಗನವಾಡಿಗಳು, ಮದರಸಾಗಳು, ಬೋಧನಾ ಕೇಂದ್ರಗಳು ಹಾಗೂ ವೃತ್ತಿಪರ ಕಾಲೇಜುಗಳಿಗೂ ರಜೆ ಅನ್ವಯಿಸುತ್ತದೆ. ಕೇರಳದಲ್ಲಿ ಮೊದಲ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆ ವೈರಸ್ ಮೂಲವನ್ನು ಪತ್ತೆ ಹಚ್ಚಲು ಕೇಂದ್ರದ ತಂಡ ಕೋಯಿಕ್ಕೋಡ್‌ಗೆ ಭೇಟಿ ನೀಡಿದೆ.

ಇದೀಗ ನಾಲ್ಕು ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ನಿಫಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!