ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ನಿಫಾ ವೈರಸ್ (Nipah Virus)ಹೆಚ್ಚಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ (Chikmagalur) ಕಟ್ಟೆಚ್ಚರವಹಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಇದರ ಜೊತೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಕೇರಳದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.
ಜಿಲ್ಲೆಯಾದ್ಯಂತ ನಿಫಾ ವೈರಸ್ ಭೀತಿ ಆವರಿಸಿದ್ದು, ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಕೇರಳದ ಪ್ರವಾಸಿಗರ ಪ್ರವೇಶವನ್ನು ಆಡಳಿತ ಮಂಡಳಿ ನಿಷೇಧಿಸಿದೆ. ಅಲ್ಲದೆ, ಕೇರಳದ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡದಂತೆ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು ಹೋಟೆಲ್‌ಗಳ ಮಾಲೀಕರಿಗೆ ಸೂಚಿಸಲಾಗಿದೆ.