ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ.
ನೈಜೀರಿಯಾದ ಎರಡನೇ ಅತ್ಯುನ್ನತ ಪುರಸ್ಕಾರ `ದಿ ಗ್ರ‍್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಗರ್’ (The Grand Commander of The Order of the Niger) ನೀಡಿ ಗೌರವಿಸಿದೆ. ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದುಕೊಂಡು 2ನೇ ಗಣ್ಯರಾಗಿದ್ದಾರೆ. ಇದಕ್ಕೂ ಮುನ್ನ ರಾಣಿ ಎಲಿಜಬೆತ್ ಅವರು 1969ರಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.