ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ಜಾರಿಯಲ್ಲಿದ್ದು, ಇದೀಗ ಈ ಮತ್ತೆ ಈ ವಿಚಾರ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಚಾರ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9 ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಬದಲಾವಣೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದರು.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಬೀದರ್ ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರೊಂದಿಗೆ ಭೇಟಿ ಮಾಡಿ, ರಾಜ್ಯದ ಮತ್ತು ಪಕ್ಷದ ವಿಧ್ಯಮಾನಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದರು.