ಹೊಸದಿಂಗತ ಡಿಜಿಟಲ್ ಡೆಸ್ಕ್:
ನಟ ಹಾಗೂ ರಾಜಕಾರಣಿ ಆಗಿರುವಂತ ನಿಖಿಲ್ ಕುಮಾರ್ ಸ್ವಾಮಿ ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಜನವರಿ 22 ರಂದು ನಡೆಯಲಿರುವ ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ.
ಈ ಹಿಂದೆ ರಿಷಬ್ ಶೆಟ್ಟಿ ಅವರಿಗೂ ಆಹ್ವಾನ ನೀಡಲಾಗಿದೆ. ಅಲ್ಲದೇ, ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ.
ಒಂದು ಕಡೆ ಉದ್ಘಾಟನೆಗೆ ಆಹ್ವಾನ ಸಿಗುತ್ತಿದ್ದರೆ ಮತ್ತೊಂದು ಕಡೆ ಸಿನಿಮಾ ಸೆಲೆಬ್ರಿಟಿಗಳು ಕೂಡ ದೇಣಿಗೆ ನೀಡುತ್ತಿದ್ದಾರೆ. ಬಹುಭಾಷಾ ನಟಿ ಪ್ರಣೀತಾ ಸುಭಾಷ್, ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. 1 ಲಕ್ಷ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.