ಕುಕ್ಕೆ ಶ್ರೀ ದೇವರ ದರುಶನ ಪಡೆದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ವರದಿ, ಮಂಗಳೂರು :

ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಸರಕಾರದ ವೈಫಲ್ಯ ಮತ್ತು ಹಗರಣದ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನುಡಿದರು.

ಈಗಾಗಲೇ ನಮ್ಮ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತೆರಳಿ ಸದಸ್ಯತ್ವ ಅಭಿಯಾನ ಮಾಡಲಾಗುವುದು.ಅಲ್ಲದೆ ಈ ಮೂಲಕ ಜೆಡಿಎಸ್‌ನ ಬಲವರ್ಧನೆಗೆ ಶ್ರಮಿಸಲಾಗುವುದು. ಮುಂದಿನ ದಿನಗಳಲ್ಲಿ ಜೆಡಿಎಸ್ ಅನ್ನು ಬಲಿಷ್ಠಗೊಳಿಸುವುದರೊಂದಿಗೆ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತಿದ್ದೇವೆ. ಯಾವುದೇ ಚುನಾವಣೆ ಇರಲಿ ಪಕ್ಷದ ಸಂಘಟನೆಗೆ ಒತ್ತನ್ನು ಕೊಡುವ ಕೆಲಸ ಮಾಡಬೇಕಾಗಿದೆ. ಆದುದರಿಂದ ಮುಂದಿನ ಚುನಾವಣೆಗೆ ಪಕ್ಷ ಸಂಘಟನಡ ಮಾಡುವತ್ತ ಗಮನ ಹರಿಸುತ್ತಿದ್ದೇವೆ ಎಂದರು.

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಸೋಮವಾರ ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದ ಅವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಜಾಕೆ ಮಾಧವ ಗೌಡ, ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಒಕ್ಕಲಿಗ ಗೌಡ ಮುಖಂಡರುಗಳಾದ ಸಂತೋಷ ಜಾಕೆ ,ಗೋಪಾಲ ಎಣ್ಣೆಮಜಲ್, ಶಿವರಾಮ ಯೇನೆಕಲ್, ಲೊಕೇಶ ಬಿ.ಎನ್, ಜಯರಾಮ ಕಟ್ಟೆಮನೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಡಾ.ತಿಲಕ್.ಎ.ಎ, ಕಾರ್ಯದರ್ಶಿ ವಿಶ್ವನಾಥ ನಡುತೋಟ, ಉಪಾಧ್ಯಕ್ಷ ನಾರಾಯಣ ಅಗ್ರಹಾರ ಉಪಸ್ಥಿತರಿದ್ದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!