ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್​ ಕುಮಾರಸ್ವಾಮಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದಾರೆ.

ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚಿಸಿದ್ದಾರೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಮೋಹನ್ ದಾಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ , ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಸೇರಿದಂತೆ ಹಲವು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮುಂದಿನ ರಾಜಕಾರಣ ಹಾಗೂ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತ ನಿಖಿಲ್​ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲು ತಯಾರಿ ನಡೆದಿವೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಅವರು ನಿಖಿಲ್​ ರಾಜ್ಯಾಧ್ಯಕ್ಷರಾಗುವ ಸುಳಿವು ನೀಡಿದ್ದಾರೆ. ಹೀಗಾಗಿ ಈ ಭೇಟಿ ಮಹತ್ವ ಪಡೆದಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಮೇಲೆ ಎಲ್ಲಾ ಪಕ್ಷದಲ್ಲಿನ ಕಾರ್ಯಚಟುವಟಿಕೆಗಳು, ಸೇರಿದಂತೆ ಮೈತ್ರಿ ಪಕ್ಷ ಬಿಜೆಪಿಯೊಂದಿಗೆ ಅನ್ಯೂನ್ಯ ಸಂಬಂಧ ಹೊಂದಿರಬೇಕಾಗುತ್ತದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷರಾಗುವ ಮೊದಲೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.

ಶಾ ಭೇಟಿಯಾಗಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ಗೌರವಪೂರ್ವಕವಾಗಿ ಅಮಿತ್ ಶಾ ಅವರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ಮಾಡಲಾಯಿತು. ಚನ್ನಪಟ್ಟಣ ಫಲಿತಾಂಶದ ಕುರಿತಾದ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಂಡೆ ಹಾಗೂ ಅವರು ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು. ಅಲ್ಲದೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದರು.

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ, ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಎಲ್ಲಾ ನಾಯಕರು ಸಂಘಟನೆಗೆ ಹೆಚ್ಚು ಕೊಡಬೇಕು ಎಂದು ಸಲಹೆ ಮಾಡಿದರು ಎಂಬುದಾಗಿ ನಿಖಿಲ್ ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!