ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಹೇಳಿರುವ ನಟ, ಜೆಡಿಎಸ್ (JDS) ಮುಖಂಡ ನಿಖಿಲ್ ಕುಮಾರಸ್ವಾಮಿ ಇಂದು ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಖಾಸಗಿ ನಿವಾಸ ಧವಳಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ನಿಖಿಲ್ ಮುಂದಿನ ರಾಜಕೀಯ ಜೀವನಕ್ಕೆ ಬಿಎಸ್‌ವೈ ಶುಭ ಕೋರಿದರು.
ಎನ್ಡಿಗೆ ಜೆಡಿಎಸ್ ಸೇರ್ಪಡೆ ಕುರಿತು ಪರಸ್ಪರ ಅಭಿನಂದಿಸಿದರು. ಈ ವೇಳೆ ಜೆಡಿಎಸ್ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಪುತ್ರ ಸಿರೀಶ್ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿ ಹಲವರು ಉಪಸ್ಥಿತರಿದ್ದರು.