ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಗೆ ರವಾನಿಸಿದ್ದು, ಪಕ್ಷಕ್ಕೆ ನೂತನ ನಾಯಕತ್ವ ನೀಡಲು ಮನವಿ ಮಾಡಿದ್ದಾರೆ.
ಪಕ್ಷದ ಜೊತೆ ನಾನು ಸದಾ ಇರುತ್ತೇನೆ, ಪಕ್ಷ ಸೋತರೆ ಅದು ಪಕ್ಷದ ಅಂತ್ಯ ಅಲ್ಲ. ಪಕ್ಷದ ಸೇವೆಗೆ ಸದಾ ಸಿದ್ಧ. ಪಕ್ಷವನ್ನು ಮರು ನಿರ್ಮಾಣ ಮಾಡಲು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ನಿಖಿಲ್ ಸ್ಥಾನಕ್ಕೆ ಯಾರು ಸೂಕ್ತ ಎನ್ನುವ ಚರ್ಚೆ ಆರಂಭವಾಗಿದೆ.
ವಿಧಾನಸಭೆಯಲ್ಲಿ ಸೋಲು ಅನುಭವಿಸಿದ ಕಾರಣ ಜೆಡಿಎಸ್ ತನ್ನ ಪಕ್ಷವನ್ನು ಮತ್ತೆ ಕಟ್ಟಲು ಚಿಂತಿಸುತ್ತಿದೆ. ನಿಖಿಲ್ ಸಿನಿಮಾಗಳ ಮೇಲೆ ಹೆಚ್ಚು ಗಮನಹರಿಸುವ ಚಿಂತನೆ ಮಾಡಿದ್ದು, ಮನೆಯಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.