ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ದೆಹಲಿಯಲ್ಲಿದ್ದು, ಹಾಗಾಗಿ ಅವರಿಗೆ ರಾಜ್ಯಕ್ಕೆ ಭೇಟಿ ನೀಡಲು ಕಡಿಮೆ ಸಮಯ ಅವಕಾಶ ಇರುವುದರಿಂದ, ಇದೀಗ ಜೆಡಿಎಸ್ ಪಾಳಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಯಾರ ಹೆಗಲಿಗೆ ನೀಡಬೇಕು ಎಂಬುದರ ಕುರಿತು ಚರ್ಚೆ ಶುರುವಾಗಿದೆ.
ಈ ಕುರಿತು ಜೆಡಿಎಸ್ ಶಾಸಕ ಹರೀಶ್ ಗೌಡ ಅಚ್ಚರಿ ಹೇಳಿಕೆ ನೀಡಿದ್ದು, ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ಎಲ್ಲಾ ರಾಜ್ಯಗಳಿಗೆ ಹೋಗಬೇಕು. ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು ಎಲ್ಲ ರಾಜ್ಯಗಳಿಗೆ ಹೋಗಬೇಕು. ಹೀಗಾಗಿ ವಾರದಲ್ಲಿ ಒಂದು ದಿನ ಕರ್ನಾಟಕಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮೆಲ್ಲರ ಜತೆ ಚರ್ಚೆ ನಡೆಸಿದ್ದಾರೆ. ಇದರಿಂದ ನಿಖಿಲ್ ಕುಮಾರಸ್ವಾಮಿ ಪಕ್ಷವನ್ನ ರಾಜ್ಯದಲ್ಲಿ ಕಟ್ಟುತ್ತಾರೆ. ಪಕ್ಷದ ನಾಯಕತ್ವದ ಬಗ್ಗೆ ಮಾತನಾಡುತ್ತಿದಂತೆ ಮಾಹಿತಿ ಬಹಿರಂಗಪಡಿಸದಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಹರೀಶ್ ಗೌಡ ಸೂಚನೆ ನೀಡಿದರು.
ಈ ವೇಳೆ ಹರೀಶ್ ಗೌಡ ಎಲ್ಲವು ತೀರ್ಮಾನ ಆಗಿದೆ ಬಿಡಣ್ಣ, ಯಾವುದೇ ಹುದ್ದೆ ಪಡೆಯದೇ ಪಕ್ಷ ಕಟ್ಟುತ್ತೇನೆ ಎಂದು ನಿಖಿಲ್ ಹೇಳಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ನಟಿಸಲ್ಲ ಎಂದು ನಿಖಿಲ್ ಘೋಷಿಸಿದ್ದಾರೆ. ನಿಖಿಲ್ ರಾಜ್ಯದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದು ತಿಳಿಸಿದರು. ಈ ಮೂಲಕ ಪರೋಕ್ಷವಾಗಿ ನಿಖಿಲ್ ಮುಂದಿನ ಜೆಡಿಎಸ್ ರಾಜ್ಯಾಧ್ಯಕ್ಷ ಎಂದು ಹೇಳಿದ್ದಾರೆ.