ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರು ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದಲ್ಲಿ ‘ಪಬ್ಲಿಕ್ ಟಿವಿ’ಯೊಂದಿಗೆ ಮಾತಾನಾಡಿದ ಅವರು, ಚನ್ನಪಟ್ಟಣದಲ್ಲಿ ಚುನಾವಣೆ ಸಂದರ್ಭ ಗ್ರೌಂಡ್ ರಿಪೋರ್ಟ್ ನೋಡಿದಾಗ ಅಲ್ಲಿನ ಜನರು ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಇದ್ದರು. ಹಾಗಾಗಿ ನಮ್ಮಗೆ ವಿಶ್ವಾಸ ಇದೆ, ಎನ್‌ಡಿಎ ಪರವಾಗಿ ಗೆಲುವು ಆಗುತ್ತದೆ ಎಂಬ ಭರವಸೆಯನ್ನು ಕ್ಷೇತ್ರದ ಜನರು ತುಂಬಿದ್ದಾರೆ ಎಂದರು.