ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಸಿದ್ಧತೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿ ಯುವ ನಾಯಕ, ಮಾಜಿ ಸಂಸದ ನಿಲೇಶ್ ರಾಣೆ ಅಚ್ಚರಿ ನಿರ್ಧಾರ ತೆಗೆದುಕೊಂಡಿದ್ದಾರೆ. ಸಕ್ರಿಯ ರಾಜಾಕರಣದಿಂದ ನಿಲೇಶ್ ರಾಣೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಟ್ವಿಟರ್ ನಿಲೇಶ್ ರಾಣೆ ಟ್ವಿಟರ್ ಮೂಲಕ ಭಾವನಾತ್ಮ ಸಂದೇಶ ಹಂಚಿಕೊಂಡಿದ್ದಾರೆ.
ನಿಲೇಶ್ ರಾಣೆ ಕೇಂದ್ರ ಸಚಿವ ನಾರಾಯಣೆ ರಾಣೆ ಪುತ್ರ. 42ರ ಹರೆಯದ ನಿಲೇಶ್ ರಾಣೆ, ಬಿಜೆಪಿ ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಸೌಭಾಗ್ಯ ಎಂದಿದ್ದಾರೆ. ಇದೇ ವೇಳೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿರುವ ಹಿಂದೆ ಯಾವುದೇ ಕಾರಣಗಳಿಲ್ಲ. ಚುನಾವಣೆಗೆ ಸ್ಪರ್ಧಿಸುವುದು, ಆಡಳಿತದಲ್ಲಿ ಆಸಕ್ತಿ ಇಲ್ಲದ ಕಾರಣ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ನಿಲೇಶ ರಾಣೆ ಸ್ಪಷ್ಟಪಡಿಸಿದ್ದಾರೆ.
ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ರಾಜಕೀಯದಲ್ಲಿ ಆಸಕ್ತಿ ಇಲ್ಲದ ಕಾರಣ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ. ಇದಕ್ಕೆ ಬೇರೆ ಕಾರಣಗಳಿಲ್ಲ. 2019 ಹಾಗೂ 2020ರಲ್ಲಿ ನನಗೆ ಪ್ರೀತಿ ನೀಡಿದ ಎಲ್ಲಾ ಜನತೆಗೆ ಕೃತಜ್ಞನಾಗಿದ್ದೇನೆ. ನನ್ನನ್ನು ಪ್ರೋತ್ಸಾಹಿಸಿ, ಬೆಂಬಲಿಸಿದ ನಿಮಗೆ ಚಿರಋಣಿ. ಬಿಜೆಪಿ ನಾಯಕರು ನನ್ನ ಮೇಲೆ ಇಟ್ಟ ಪ್ರೀತಿ, ನಂಬಿಕೆ, ಬಿಜೆಪಿಯಂತ ಅತೀ ದೊಡ್ಡ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಠ. ನಾನು ಸಣ್ಣವ. ಆದರೆ ರಾಜಕೀಯದಿಂದ ಬಹಳಷ್ಟು ಕಲಿತಿದ್ದೇನೆ. ಕೆಲವು ಸಹದ್ಯೋಗಿಗಳು ಕುಟುಂಬದ ಭಾಗವಾಗಿದ್ದಾರೆ. ಈ ಕುಟುಂಬಕ್ಕೆ ಜೀವನದಲ್ಲಿ ಯಾವಾಗಲೂ ಋಣಿಯಾಗಿದ್ದೇನೆ. ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲು ನಾನು ಆಸಕ್ತಿ ಹೊಂದಿಲ್ಲ. ಟೀಕೆಗಳು ಸಹಜ, ಟೀಕಿಸುತ್ತಾರೆ. ಆದರೆ ರಾಜಕೀಯ ನನ್ನ ಜೀವನ, ನನ್ನ ಸಮಯಕ್ಕೆ ಸರಿ ಹೊಂದುತ್ತಿಲ್ಲ. ಹೀಗಾಗಿ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಉದ್ದೇಶಪೂರ್ವಕವಾಗಿ ಕೆಲವರ ಮನಸ್ಸು ನೋಯಿಸಿದ್ದಕ್ಕೆ ಕ್ಷಮೆ ಇರಲಿ ಎಂದು ನಿಲೇಶ್ ರಾಣೆ ಹೇಳಿಕೊಂಡಿದ್ದಾರೆ .
2009ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ನಿಲೇಶ್ ರಾಣೆ ಸಂಸದರಾಗಿ ಆಯ್ಕೆಯಾಗಿದ್ದರು. ಮಹಾರಾಷ್ಟ್ರದ ರತ್ನಗಿರಿ ಸಿಂಧೂದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಬಿಜೆಪಿ ಸೇರಿಕೊಂಡ ನಿಲೇಶ್ ರಾಣೆ ಲೋಕಸಭೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ಬಿಜೆಪಿಯ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.