ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ 34 ನರವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಎಂಬಿಬಿಎಸ್, ಎಂ.ಡಿ, ಡಿ.ಎಂ, ಡಿಎನ್‌ಬಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/- ರಿಂದ 1,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 20,2023ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.