ಡಬ್ಲೂಎಚ್‌ಒ ನೆಲ್ಸನ್ ಮಂಡೇಲಾ ಪ್ರಶಸ್ತಿ ಮುಡಿಗೇರಿಸಿಕೊಂಡ ʼNIMHANSʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2024ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನಿಮ್ಹಾನ್ಸ್ ಗೆ  ನೀಡಿ ಗೌರವಿಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಈ ಗೌರವ ದೊರಕಿದ್ದು,
ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಅಂತೆಯೇ ಈ ಪ್ರಶಸ್ತಿಗೆ ನಿಮ್ಹಾನ್ಸ್‌ ಆಸ್ಪತ್ರೆಗೆ ಒಲಿದು ಬಂದಿದೆ. ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಅವರು ಜಿನೀವಾದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!