ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಹಲವೆಡೆ ಭೂಕಂಪ ಸಂಭವಿಸಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ಇಸ್ಲಾಮಾಬಾದ್, ಲಾಹೋರ್, ಪೇಶಾವರ ಹಾಗೂ ರಾವಲ್ಪಿಂಡಿ ಸೇರಿ ಹಲವು ನಗರದಲ್ಲಿ ಭೂಕಂಪನ ಸಂಭವಿಸಿದ್ದು, 150 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭೂಮಿಯ 180 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪದಿಂದ ಸಾಕಷ್ಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.