ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೋಲ್ಕತಾದ ಪೂರ್ವ ರೈಲ್ವೆ ಮುಖ್ಯ ಕಚೇರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ನಾಲ್ವರು ಅಗ್ನಿಶಾಮಕ ದಳ, ರೈಲ್ವೆ ಅಧಿಕಾರಿ, ಆರ್ಪಿಎಫ್ ಕಾನ್ಸ್ಟೆಬಲ್ ಮತ್ತು ಕೋಲ್ಕತಾ ಪೊಲೀಸರ ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 9 ಮಂದಿ ಸಜೀವವಾಗಿ ದಹಿಸಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಸರ್ಕಾರದ ಎಂಐಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸುಜಿತ್ ಬೋಸ್ ಈ ಬಗ್ಗೆ ಮಾಹಿತಿ ನೀಡಿದ್ದು, ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ. ಅಗ್ನಿದುರಂತ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಆದರೆ ದುರದೃಷ್ಟವಶಾತ್ ಅವರಲ್ಲಿ ನಾಲ್ವರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ.
ಸ್ಟ್ರಾಂಡ್ ರಸ್ತೆಯಲ್ಲಿ ದ್ದ 14 ಅಂತಸ್ತಿನ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಕೆಳಗಡೆ ಹೋಗಲು ಲಿಫ್ಟ್ ಬಳಸಲು ಶುರು ಮಾಡಿದರು. ಈ ಹಿನ್ನೆಲೆಯಲ್ಲಿ ಅದರೊಳಗೆ ಸಿಲುಕಿ ಮೃತಪಟ್ಟಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ. ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ಮತ್ತು ಮೃತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ತಿಳಿಸಿದ್ದಾರೆ.