ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ: ಒಂಬತ್ತು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬುಡಗಾವಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಎಸ್‌ಯುವಿ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಮದುವೆ ಮುಗಿಸಿ ವಾಪಾಸಾಗುತ್ತಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಸಂಬಂಧಿಕರೇ ಆಗಿದ್ದಾರೆ. ಬಳ್ಳಾರಿಯಲ್ಲಿ ಮದುವೆ ಮುಗಿಸಿ ಆಂಧ್ರದ ಉರವಕೊಂಡ ಗ್ರಾಮಕ್ಕೆ ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.

ಲಾರಿ ಚಾಲಕ ವೇಗವಾಗಿ ವಾಹನ ಓಡಿಸಿದ್ದು ಅಪಘಾತದಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಎಂಟು ಮಂಡಿ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!