ಬಲೂಚಿಸ್ತಾನ ರಿಪಬ್ಲಿಕನ್ ಸೇನೆಯ ಒಂಬತ್ತು ಸದಸ್ಯರು ಪಾಕಿಸ್ತಾನ ಸೇನೆ ಗುಂಡಿಗೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಬಲೂಚಿಸ್ತಾನಿ ಪ್ರತ್ಯೇಕತಾವಾದಿಗಳ ಅಡಗುತಾಣದ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ ಭದ್ರತಾ ಪಡೆಗಳು ಬಲೂಚ್ ರಿಪಬ್ಲಿಕನ್ ಆರ್ಮಿಯ ಒಂಬತ್ತು ಸದಸ್ಯರನ್ನು ಕೊಂದುಹಾಕಿವೆ.
ಕಾರ್ಯಾಚರಣೆ ವೇಳೆ ಗಾಯಗೊಂಡ ಸಂಘಟನೆಯ ಮೂವರು ಸದಸ್ಯರನ್ನು ಸಹ ಬಂಧಿಸಲಾಗಿದೆ.
ಬಲೂಚಿಸ್ತಾನ್ ಪ್ರಾಂತ್ಯದ ಕೊಹ್ಲು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ಪ್ರದೇಶದಲ್ಲಿ ಸಂಘಟನೆಯ ಸದಸ್ಯರು ಅಡಗಿಕೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆಯ ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಷನ್ಸ್ ವಿಭಾಗ ತಿಳಿಸಿದೆ.
ಕೊಹ್ಲು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ವಿಶೇಷ ಕಾರ್ಯಾಚರಣೆ ಆರಂಭಗೊಂಡಿದ್ದು, ಈ ವೇಳೆ ಬಂಡುಕೋರರು ಮತ್ತು ಭದ್ರತಾ ಪಡೆಗಳ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ ಎಂದು ಅದು ತಿಳಿಸಿದೆ.
ಈ ಭಯೋತ್ಪಾದಕರು ಸುಲಿಗೆಗಾಗಿ ಅಪಹರಣ, ಸುಲಿಗೆ ದಂಧೆಗಳು ಮತ್ತು ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಯಲ್ಲೂ ಭಾಗಿಯಾಗಿದ್ದಾರೆ ಎಂದು ಪಾಕಿಸ್ತಾನ ಸೇನೆಯ ಹೇಳಿಕೆ ತಿಳಿಸಿದೆ. ಕೊಲ್ಲಲ್ಪಟ್ಟ ಬಂಡುಕೋರರು  ಬಲೂಚಿಸ್ತಾನ್ ಪ್ರಾಂತ್ಯಕ್ಕೆ ಬಂದ ಪಾಕ್‌- ಚೀನಾ ಕಾರಿಡಾರ್‌ ಯೋಜನೆಯ ಎಂಜಿನಿಯರ್‌ಗಳು ಮತ್ತು ಕಾರ್ಮಿಕರ ಮೇಲೆ ದಾಳಿ ನಡೆಸಿದ್ದರು ಎಂದು ಅದು ಹೇಳಿದೆ. ಬಲೂಚಿಸ್ತಾನ್ ಭೂ ಪ್ರದೇಶದ ದೃಷ್ಟಿಯಿಂದ ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾಗಿದೆ. ಇದು ಬಹು-ಶತಕೋಟಿ ಡಾಲರ್ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಗೆ ನೆಲೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!