ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಒಂಬತ್ತು ಪೊಲೀಸರು ಮೃತಪಟ್ಟಿದ್ದಾರೆ.
ದಾಳಿಯಲ್ಲಿ 15 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ.
ಬಲೂಚಿಸ್ತಾನದ ಬೋಲನ್ ಪ್ರದೇಶದ ಕಾಂಬ್ರಿ ಸೇತುವೆ ಬಳಿ ಘಟನೆ ನಡೆದಿದ್ದು, ಸೂಸೈಡ್ ಬಾಂಬರ್ ಬೈಕ್ನಲ್ಲಿ ಬಂದು ಹಿಂಬದಿಯಿಂದ ಟ್ರಕ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಅಬ್ದುಲ್ ಹೈ ಅಮೀರ್ ಹೇಳಿದ್ದಾರೆ.