ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಪಾ ವೈರಸ್ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಪಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿ‌ವರಾದ ವೀಣಾ ಜಾರ್ಜ್ ತಿಳಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಲ್ಲಿ ನಿಪಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ ಎಂದು ಮಾಧ್ಯಮದವರಿಗೆ ಶನಿವಾರ ಹೇಳಿದರು.

ಸೋಂಕಿತನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಸಂಪರ್ಕಕ್ಕೆ ಬಂದಿದ್ದವರ ಪತ್ತೆ ನಡೆದಿದೆ. ನಿಕಟ ಸಂಪರ್ಕದಲ್ಲಿದ್ದವರು ಈಗಾಗಲೇ ಪ್ರತ್ಯೇಕ ವಾಸದಲ್ಲಿದ್ದಾರೆ. ಇವರೆಲ್ಲರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!