ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮಾರಕ ನಿಫಾ ವೈರಸ್ ಮತ್ತೆ ವಕ್ಕರಿಸಿದ್ದು, ಪಾಲಕ್ಕಾಡ್‌ನ 38 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಮಲಪ್ಪುರಂನ 18 ವರ್ಷದ ಯುವತಿ ಸಾವನ್ನಪ್ಪಿದ್ದಳು. ಯುವತಿಯಲ್ಲಿ ನಿಫಾ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ಇಬ್ಬರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ರವಾನಿಸಲಾಗಿತ್ತು. ಇದೀಗ ಇಬ್ಬರಲ್ಲೂ ಸೋಂಕು ಇರುವುದು ದೃಢಪಟ್ಟಿದೆ.
ಜುಲೈ 1 ರಂದು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದರೆ, ಮಲಪ್ಪುರಂನ ಪೆರಿಂಥಲ್ಮನ್ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋಝಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮೂರು ಜಿಲ್ಲೆಗಳ ಅಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಮತ್ತು ಸಂಘಟಿತ ನಿಯಂತ್ರಣ ಮತ್ತು ಕಣ್ಗಾವಲು ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ.