ಕೇರಳದಲ್ಲಿ ನಿಫಾ ವೈರಸ್: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಫಾ ವೈರಸ್‌ನಿಂದಾಗಿ ಇಬ್ಬರು ಮೃತಪಟ್ಟಿದ್ದು, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಹಾಗೂ ಅಲ್ಲಿಂದ ಪ್ರಯಾಣಿಸುವವರಿಗೆ ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಇಂದು ಕೇರಳದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳೊಂದು ಸರ್ಕಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದೆ.

ಮೈಸೂರು,ಕೊಡಗು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯೂ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಲಿದೆ. ಈ ಹಿಂದೆ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಾಗಲು ಮೈಸೂರು, ಚಾವರಾಜನಗರ, ಮಂಗಳೂರು ಹಾಗೂ ಕೊಡಗಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!