BIG NEWS | ನೀರವ್ ಮೋದಿ ಮೇಲ್ಮನವಿ ತಿರಸ್ಕಾರ: ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾವಿರಾರು ಕೋಟಿ ಬ್ಯಾಂಕ್‌ಗಳಿಗೆ ವಂಚಿಸಿ ಭಾರತದಿಂದ ಪರಾರಿಯಾಗಿದ್ದ ಉದ್ಯಮಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಇದು ಕಳೆದೆರಡು ವರ್ಷಗಳಿಂದ ಸತತ ಕಾನೂನು ಹೋರಾಟ ನಡೆಸುತ್ತಿದ್ದ ಭಾರತಕ್ಕೆ ಸಿಕ್ಕ ಜಯವಾಗಿದೆ.
ಈ ವರ್ಷದ ಆರಂಭದಲ್ಲಿ ಮೇಲ್ಮನವಿ ವಿಚಾರಣೆಯ ನೇತೃತ್ವ ವಹಿಸಿದ್ದ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರು ಈ ತೀರ್ಪು ನೀಡಿದ್ದಾರೆ.

ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ 51 ವರ್ಷದ ನೀರವ್ ಮೋದಿಗೆ ಕಳೆದ ಫೆಬ್ರವರಿಯಲ್ಲಿ ಹಸ್ತಾಂತರದ ಪರವಾಗಿ ಜಿಲ್ಲಾ ನ್ಯಾಯಾಧೀಶ ಸ್ಯಾಮ್ ಗೂಜೀ ಅವರ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.

ಮಾನವ ಹಕ್ಕುಗಳ ಯುರೋಪಿಯನ್ ಕನ್ವೆನ್ಷನ್ (ECHR) ನ 3 ನೇ ವಿಧಿಯ ಅಡಿಯಲ್ಲಿ ಮೋದಿಯ ಮಾನಸಿಕ ಸ್ಥಿತಿ ಮತ್ತು ಮಾನಸಿಕ ಅಸ್ವಸ್ಥತೆಗೆ ಸಂಬಂಧಿಸಿದ ಹಸ್ತಾಂತರ ಕಾಯಿದೆ 2003 ರ ಸೆಕ್ಷನ್ 91 ರ ಕಾರಣದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!