ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಂಸತ್ತಿನ ಅಧಿಕೃತ ಚಾನೆಲ್‌ಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನದಲ್ಲಿದ್ದಾರೆ. ಬಜೆಟ್ ಮಂಡಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮತಿ ಪಡೆದಿದ್ದಾರೆ. ಇದೀಗ ಸಂಪುಟ ಸಭೆ ನಡೆಯಲಿದ್ದು, ಬಜೆಟ್ಗೆ ಅನುಮೋದನೆ ದೊರೆಯಲಿದೆ.
ಕೇಂದ್ರ ಬಜೆಟ್ ಮಂಡನೆಗೆ ರಾಷ್ಟ್ರಪತಿ ಅನುಮತಿ ಪಡೆದ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಬಜೆಟ್ ಮಂಡನೆಯಾಗಲಿದೆ.
#WATCH | #UnionBudget2025 | Delhi: Union Finance Minister Nirmala Sitharaman arrives at the Parliament, after meeting President Droupadi Murmu at Rashtrapati Bhavan. She will present Union Budget at the House, shortly. pic.twitter.com/AHO3oBLM8l
— ANI (@ANI) February 1, 2025