Tuesday, June 28, 2022

Latest Posts

ಯುಪಿ ಮಹಿಳೆಯರಿಗೆ ಸುರಕ್ಷಿತ: ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಪ್ರದೇಶ ಸರ್ಕಾರದ ಮಹಿಳಾ ಸಬಲೀಕರಣ ಕಾರ್ಯಕ್ರಮವಾದ ಮಿಷನ್ ಶಕ್ತಿ 3.0 ಅನ್ನು ಆರಂಭಿಸಲಾಗಿದ್ದು, ಈ ಮೂಲಕ ಯುಪಿ ಮಹಿಳೆಯರಿಗಾಗಿ ಸುರಕ್ಷಿತವನ್ನಾಗಿಸಿದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಉತ್ತರ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಒಂದೇ ಹುರುಪಿನಿಂದ ಕಾರ್ಯಗತಗೊಳಿಸುತ್ತಿದೆ ಎಂದು ಸೀತಾರಾಮನ್ ಹೇಳಿದರು.
ಯುಪಿ ಸರ್ಕಾರದ ‘ಮಿಷನ್ ಶಕ್ತಿ’ ಅಭಿಯಾನವು ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವತ್ತ ಗಮನಹರಿಸುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವರು, ಇತ್ತೀಚೆಗೆ ಕೇಂದ್ರ ಮಂತ್ರಿ ಮಂಡಳಿಯ ಪುನರ್ರಚನೆಯಲ್ಲಿ ಮೋದಿ ಕ್ಯಾಬಿನೆಟ್ ನಲ್ಲಿ 11 ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.
ಕೇಂದ್ರ ಸರ್ಕಾರವು ಹಳ್ಳಿಗಳಲ್ಲಿ ಶೇಖರಣಾ ಸೌಲಭ್ಯಗಳಿಗಾಗಿ ಹಣವನ್ನು ನೀಡುತ್ತದೆ. ಈ ಅವಕಾಶವನ್ನು ಬಳಸಿಕೊಳ್ಳಲು ಮತ್ತು ಸ್ಥಳೀಯವಾಗಿ ಉತ್ಪಾದಿಸಿದ ವಸ್ತುಗಳನ್ನು ಸಂಗ್ರಹಿಸಲು ಹಳ್ಳಿಗಳಲ್ಲಿ ಶೇಖರಣಾ ಸೌಲಭ್ಯವನ್ನು ನಿರ್ಮಿಸಲು ನಾನು ಎಲ್ಲಾ ಮಹಿಳಾ ಸ್ವಸಹಾಯ ಸಂಘಗಳನ್ನು ವಿನಂತಿಸುತ್ತೇನೆ ಎಂದರು.
ಮುಖ್ಯಮಂತ್ರಿ ಆದಿತ್ಯನಾಥ್ ಅವರ ‘ಶಕ್ತಿ’ ಮತ್ತು ‘ಕೆಲಸ ಮಾಡುವ ಸಾಮರ್ಥ್ಯ’ಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಸೀತಾರಾಮನ್, ಯುಪಿ ಸಿಎಂ ಕಳೆದ 4 ವರ್ಷಗಳಲ್ಲಿ ರಾಜ್ಯದ ಪ್ರತಿ ಜಿಲ್ಲೆಗೆ ಕನಿಷ್ಠ 10 ಬಾರಿ ಭೇಟಿ ನೀಡಿರಬೇಕು.
ರಾಜ್ಯದಲ್ಲಿ ಮಹಿಳೆಯರನ್ನು ಸುರಕ್ಷಿತವಾಗಿ ಭಾವಿಸಿದ್ದಕ್ಕಾಗಿ, ಒಟ್ಟಾರೆ ಅಭಿವೃದ್ಧಿಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಗಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss