Thursday, November 20, 2025

ನಾಳೆಯಿಂದ 2 ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಪ್ರವಾಸ ಕೈಗೊಂಡಿದ್ದಾರೆ.

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ.

ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ ನೆರೆ ಪರಿಹಾರ ಕೋರಿ ರಾಜ್ಯದಿಂದ ಪತ್ರ ಬರೆಯಲು ಸಿದ್ಧತೆ ಬೆನ್ನಲ್ಲೇ ವಿತ್ತ ಸಚಿವೆ ರಾಜ್ಯ ಭೇಟಿ ಕೈಗೊಂಡಿದ್ದಾರೆ.

error: Content is protected !!