ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಪತಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಟಿಟಿಡಿ ಅಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ನೀಡಿ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ದರ್ಶನದ ನಂತರ, ರಂಗನಾಯಕಕುಲ ಮಂಟಪದಲ್ಲಿ ವಿದ್ವಾಂಸರು ಅವರನ್ನು ಆಶೀರ್ವದಿಸಿ ದೇವರ ಕಾಣಿಕೆಗಳನ್ನು ನೀಡಿದರು.
ಗುರುವಾರ ಸಂಜೆ ಕುಟುಂಬ ಸದಸ್ಯರೊಂದಿಗೆ ತಿರುಮಲ ಬೆಟ್ಟದ ಪಟ್ಟಣಕ್ಕೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದರು. ಶ್ರೀ ಗಾಯತ್ರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ ಅವರನ್ನು ಟಿಟಿಡಿ ಹೆಚ್ಚುವರಿ ಇಒ ವೆಂಕಯ್ಯ ಚೌಧರಿ ಆತ್ಮೀಯವಾಗಿ ಸ್ವಾಗತಿಸಿದ್ದರು.
ಕೇಂದ್ರ ಸಚಿವರು ಶುಕ್ರವಾರ ಬೆಳಗ್ಗೆ ತಿರುಪತಿಗೆ ತೆರಳಿ ಪೂಜೆ ಸಲ್ಲಿಸಿದರು. ಸಿವಿಎಸ್ಒ ಮುರಳೀಕೃಷ್ಣ, ಸ್ವಾಗತ ಉಪ ಕಾರ್ಯನಿರ್ವಾಹಕ ಅಧಿಕಾರಿ ಭಾಸ್ಕರ್ ಇತರರು ಉಪಸ್ಥಿತರಿದ್ದರು. ಪೂಜೆ ಬಳಿಕ ನಿರ್ಮಲಾ ಸೀತಾರಾಮನ್ ಅವರು ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಗಮಾಂಬ ಅನ್ನಪ್ರಸಾದ ಸಂಕೀರ್ಣದಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದರು.