April 12, 2026
Sunday, April 12, 2026
spot_img

ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾದ ನಿರ್ಮಲಾನಂದನಾಥ ಸ್ವಾಮೀಜಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ದಾಖಲಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ದೇವೇಗೌಡರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಶೀಘ್ರ ಗುಣಮುಖರಾಗುವಂತೆ ದೇವೇಗೌಡರಿಗೆ ಹಾರೈಸಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಚೇತರಿಸಿಕೊಂಡಿರುವ ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸಚಾರ್ಜ್ ಆಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !