ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮದಲ್ಲಿ 81 ಸಹಾಯಕ ವ್ಯವಸ್ಥಾಪಕ, ಸಾಮಾನ್ಯ ವ್ಯವಸ್ಥಾಪಕ, ಮುಖ್ಯ ವ್ಯವಸ್ಥಾಪಕ ಮತ್ತು ಡೆಪ್ಯುಟಿ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಿಎ, ಎಲ್‌ಎಲ್‌ಬಿ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ, ಎಂಬಿಎ ವಿದ್ಯಾರ್ಹತೆ ಜೊತೆಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 2,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 29,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.