Paralympics | ಹೈ ಜಂಪ್​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಟ್ಟ ನಿಶಾದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್‌ನ ಪುರುಷರ ಹೈ ಜಂಪ್ ಟಿ47 ಸ್ಪರ್ಧೆಯಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.

11 ಮಂದಿ ಒಳಗೊಂಡಿದ್ದ ಫೈನಲ್ ಸ್ಪರ್ಧೆಯಲ್ಲಿ ನಿಶಾದ್ ಆರಂಭದಲ್ಲೇ ಉತ್ತಮ ಪ್ರದರ್ಶನ ನೀಡಿದ್ದರು. ಇದಾಗ್ಯೂ ಟಾಪ್-3 ಗೇರಲು ತುಸು ಹೆಚ್ಚೇ ಕಷ್ಟಪಟ್ಟರು ಆದರೆ ಅಂತಿಮವಾಗಿ ನಿಶಾದ್ 2.04 ಮೀಟರ್ ಜೀಗಿತದೊಂದಿಗೆ ಸೀಸನ್-ಅತ್ಯುತ್ತಮ ಜಂಪ್​ ಸಾಧಿಸುವ ಮೂಲಕ ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದಾರೆ.

ಇನ್ನು ಯುಎಸ್​ಎ ಟೌನ್ಸೆಂಡ್ 2.12 ಮೀ ಮಾರ್ಕ್​ನೊಂದಿಗೆ ಚಿನ್ನದ ಪದಕ ಗೆದ್ದುಕೊಂಡರೆ, ತಟಸ್ಥ ಪ್ಯಾರಾಲಿಂಪಿಕ್ ಅಥ್ಲೀಟ್‌ಗಳನ್ನು ಪ್ರತಿನಿಧಿಸಿದ್ದ ಜಾರ್ಜಿ ಮಾರ್ಗೀವ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!