ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಸುರತ್ಕಲ್ ನಲ್ಲಿ 107 ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿದಾರರು ಆನ್‌ಲೈನ್ ಮೂಲಕ ಜೂನ್ 23,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.