ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ NITI ಆಯೋಗ್ ಆಡಳಿತ ಮಂಡಳಿ ಸಭೆ; ಬೆಳೆ ಅಭಿವೃದ್ಧಿ, ಶಿಕ್ಷಣ ನೀತಿ ಇತ್ಯಾದಿಗಳ ಕುರಿತು ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಭಾರತದ NITI ಆಯೋಗದ ಏಳನೇ ಆಡಳಿತ ಮಂಡಳಿಯ ಸಭೆ ನಡೆಯುತ್ತಿದೆ. ದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಭವನದಲ್ಲಿ ಈ ಸಭೆ ನಡೆಯುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.

2019ರ ಜುಲೈ ನಂತರ ಇದು ಮೊದಲನೇ ವೈಯುಕ್ತಿಕ ಸಬೆಯಾಗಿದೆ. ಕಳೆದ ಎರಡು ವರ್ಷಗಳಿಂದ, ಸಾಂಕ್ರಾಮಿಕ ರೋಗದ ಮಧ್ಯೆ ಪ್ರಮುಖ NITI ಆಯೋಗ್ ಸಮ್ಮೇಳನವನ್ನು ವೈಯಕ್ತಿಕವಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ನೀತಿ ಆಯೋಗದ ಸಭೆಯ ಕಾರ್ಯಸೂಚಿಯು ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳು ಮತ್ತು ಕೃಷಿ ಸಮುದಾಯಗಳಲ್ಲಿ ಸ್ವಾವಲಂಬನೆ ಸಾಧಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ, ಬೆಳೆ ವೈವಿಧ್ಯೀಕರಣವನ್ನು ಮತ್ತು ಇತರ ವಿಷಯಗಳನ್ನು ಒಳಗೊಂಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯಪ್ರದೇಶದ ಶಿವರಾಜ್ ಚೌಹಾಣ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ರಾಷ್ಟ್ರೀಯ ಆದ್ಯತೆಗಳು ಮತ್ತು ಕಾರ್ಯತಂತ್ರಗಳ ಹಂಚಿಕೆಯ ದೃಷ್ಟಿಯನ್ನು ವಿಕಸನಗೊಳಿಸುವ ಕುರಿತು ಆಡಳಿತ ಮಂಡಳಿ ಚರ್ಚೆ ನಡೆಸಲಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!