spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೈಜು’ಸ್ ನೊಂದಿಗೆ ನೀತಿ ಆಯೋಗ: 112 ಜಿಲ್ಲೆಯ ಮಕ್ಕಳಿಗೆ ಉಚಿತ ಶಿಕ್ಷಣ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋಚಿಂಗ್ ನ ದೈತ್ಯ ಸಂಸ್ಥೆ ಬೈಜು’ಸ್ ನ ಸಹಭಾಗಿತ್ವದಲ್ಲಿ ಕೇಂದ್ರ ನೀತಿ ಆಯೋಗ 112 ಜಿಲ್ಲೆಯ ಮಕ್ಕಳಿಗೆ ಶಿಕ್ಷಣ ತರಬೇತಿ ನೀಡಲು ಮುಂದಾಗಿದೆ.
ಈ ಹೊಸ ಯೋಜನೆಯ ಅಡಿಯಲ್ಲಿ 112 ಮಹತ್ವಾಕಾಂಕ್ಷಿ ಜಿಲ್ಲೆಗಳ ಸರ್ಕಾರಿ ಶಾಲೆಯ 6-12ನೇ ತರಗತಿ ವಿದ್ಯಾರ್ಥಿಗಳಿಗೆ ಈ ಅವಕಾಶ ದೊರೆಯಲಿದೆ.
ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಜಲ ಸಂಪನ್ಮೂಲಗಳು, ಮೂಲಸೌಕರ್ಯಗಳು, ಹಣಕಾಸು ಮತ್ತು ಕೌಶಲ್ಯ ಅಭಿವೃದ್ಧಿಗಳು ಸವಾಲಾಗಿರುವ ಜಿಲ್ಲೆಗಳನ್ನು ಮಹತ್ವಾಕಾಂಕ್ಷಿ ಜಿಲ್ಲೆಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಆಕಾಶ್ ಇನ್ ಸ್ಟಿಟ್ಯೂಟ್ ನ ಕೋಚಿಂಗ್ ಸಾಮಗ್ರಿಗಳನ್ನ ಬಳಸಿಕೊಂಡು ಈ ಯೋಜನೆಯ ಅಡಿಯಲ್ಲಿ 3 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಹಾಗೂ ಜೆಇಇ ಪರೀಕ್ಷಾ ತರಬೇತಿ ನೀಡುವುದಾಗಿ ಬೈಜು’ಸ್ ನೀಡಲಿದೆ.
ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದು, ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ನೀತಿ ಆಯೋಗ ಪತ್ರ ಬರೆದಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಕಲಿಕಾ ಸಂಪನ್ಮೂಲ ಲಭ್ಯವಾಗುವಂತೆ ಮಾಡಬೇಕು ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss