Thursday, September 11, 2025

ಆನ್‌ಲೈನ್‌ನಲ್ಲಿ ಎಥೆನಾಲ್ ಮಿಶ್ರಿತ ಇಂಧನ ಬಿಡುಗಡೆ ಕುರಿತ ಟೀಕೆಗೆ ನಿತಿನ್ ಗಡ್ಕರಿ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದ E20 ಬಿಡುಗಡೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ ಹಾಗೂ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದ್ದು, ‘ನನ್ನ ವಿರುದ್ಧ ಹಣ ಪಡೆದು ರಾಜಕೀಯ ಪ್ರಚಾರ ನಡೆಸಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಸರ್ಕಾರದ ಎಥೆನಾಲ್ ಮಿಶ್ರಿತ ಇಂಧನ ಬಿಡುಗಡೆಯ ವಿರುದ್ಧ ತೀವ್ರ ವಿರೋಧದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ “ಪೇಯ್ಡ್ ರಾಜಕೀಯ ಅಭಿಯಾನ”ಕ್ಕೆ ಬಲಿಯಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

“ARAI ಮತ್ತು ಸುಪ್ರೀಂ ಕೋರ್ಟ್ E20 ಕಾರ್ಯಕ್ರಮದ ಬಗ್ಗೆ ಸ್ಪಷ್ಟನೆ ನೀಡಿವೆ. ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸಲಾಗಿದೆ. ಇದು ಪೇಯ್ಡ್ ಅಭಿಯಾನವಾಗಿತ್ತು. ಆದ್ದರಿಂದ ಅದರ ಬಗ್ಗೆ ಗಮನ ಹರಿಸಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ