January22, 2026
Thursday, January 22, 2026
spot_img

ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತಿನ್ ನಬಿನ್ ಪದಗ್ರಹಣ ಮಾಡಿದ್ದಾರೆ.

ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿದ ನಿತಿನ್ ನಬಿನ್, ತಮ್ಮಂತಹ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ದೊಡ್ಡ ಜವಾಬ್ದಾರಿ ನೀಡಿರುವುದಕ್ಕೆ ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮಾರ್ಗದರ್ಶನವೇ ತಮ್ಮ ರಾಜಕೀಯ ಪಯಣಕ್ಕೆ ಶಕ್ತಿ ನೀಡಿದೆ ಎಂದು ಅವರು ಹೇಳಿದರು. ಪಕ್ಷದ ತತ್ವ ಮತ್ತು ಶಿಸ್ತಿನ ಮೇಲೆ ಸದಾ ನಂಬಿಕೆ ಇಟ್ಟುಕೊಂಡು ಕೆಲಸ ಮಾಡುವುದೇ ತಮ್ಮ ಗುರಿ ಎಂದು ನಬಿನ್ ತಿಳಿಸಿದರು.

ಬಿಹಾರ ಸರ್ಕಾರದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿರುವ ನಿತಿನ್ ನಬಿನ್, ಪಕ್ಷದ ಸಂಘಟನಾ ಕಾರ್ಯದಲ್ಲಿ ಅನುಭವ ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಎಬಿವಿಪಿಯಿಂದ ರಾಜಕೀಯ ಜೀವನ ಆರಂಭಿಸಿದ ಅವರು, ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಬಿಹಾರದಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Must Read