January20, 2026
Tuesday, January 20, 2026
spot_img

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ.

1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ ಅಧಿಕಾರ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಪಕ್ಷ ನಡೆಸಿದ ಚುನಾವಣೆಯಲ್ಲಿ ನಿತಿನ್ ಅವರು ಅವಿರೋಧವಾಗಿ ಆಯ್ಕೆಯಾದರು. ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅವರ ಸಮ್ಮುಖದಲ್ಲಿ ನಬಿನ್, ನೂತನ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಬಳಿಕ ಗಣ್ಯರು ಶುಭ ಹಾರೈಸಿದ್ದಾರೆ.

ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್‌ ಅವರು ನಬಿನ್ ಅವರ ಆಯ್ಕೆಯನ್ನ ಘೋಷಿಸಿ, ಪ್ರಮಾಣಪತ್ರ ನೀಡಿದರು.ಈ ಮೊದಲು ನಬಿನ್ ಅವರನ್ನ ಪಕ್ಷದ ಕಾರ್ಯಾಧ್ಯಕ್ಷರಾಗಿ ಬಿಜೆಪಿ ನೇಮಿಸಿತ್ತು. ನೂತನ ಹುದ್ದೆಗೆ ಸ್ಪರ್ಧೆಗೂ ಮೊದಲ ಅವರು ಬಿಹಾರ ಸರ್ಕಾರದಲ್ಲಿ ಕಾನೂನು ಮತ್ತು ನ್ಯಾಯ, ವಸತಿ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಬಿಹಾರ ಬಿಜೆಪಿಯ ಹಿರಿಯ ನಾಯಕ, ಪಾಟ್ನಾದಿಂದ 4 ಬಾರಿ ಎಂಎಲ್‌ಎ ಆಗಿದ್ದ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿಂಹ ಅವರ ಮಗನಾಗಿರುವ ನಿತಿನ್, ತಂದೆಯ ನಿಧನದ ಬಳಿಕ ಬಿಹಾರದ ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಜೊತೆಗೂ ಅವಿನಾಭಾವ ಸಂಬಂಧ ಹೊಂದಿರುವ ನಬಿನ್, ಸಂಘಟನಾ ಚತುರ ಅಂತಲೇ ಗುರುತಿಸಿಕೊಂಡಿದ್ದಾರೆ.

Must Read