Friday, October 7, 2022

Latest Posts

ಮಹಾಘಟಬಂಧನ್‌ ದೊಂದಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಿತೀಶ್‌ ಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಬಿಹಾರ ರಾಜಕೀಯದ ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಆರ್‌ಜೆಡಿಯ ತೇಜಸ್ವಿ ಯಾದವ್ ಅವರೊಂದಿಗೆ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ರಾಜಭವನಕ್ಕೆ ತೆರಳಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಏಳು ಪಕ್ಷಗಳ ಮಹಾಘಟಬಂಧನ್ (ಮಹಾ ಮೈತ್ರಿ) ಒಟ್ಟಾಗಿ ಕೆಲಸ ಮಾಡಲಿದೆ ಎಂದಿದ್ದಾರೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಬಿಜೆಪಿ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿರುವುದು ಇದು ಎರಡನೇ ಬಾರಿಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!