ವಿಪಕ್ಷಗಳ ಮೈತ್ರಿಕೂಟದ `INDIA’ಗೆ ನಿತೀಶ್ ಕುಮಾರ್ ಅಸಮಾಧಾನ: ಹೆಸರು ಬದಲಾಯಿಸುವಂತೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಪ್ರತಿಪಕ್ಷಗಳು ಮಾಡಿಕೊಂಡ ಮೈತ್ರಿಗೆ ಇಟ್ಟ ಹೆಸರಿನ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಸಮಾಧಾನ ಹೊರಹಾಕಿದ್ದಾರೆ. ಪ್ರತಿಪಕ್ಷಗಳ ಮೊದಲ ಸಭೆ ಪಾಟ್ನಾದಲ್ಲಿ, ಎರಡನೇ ಸಭೆ ಬೆಂಗಳೂರಿನಲ್ಲಿ  ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಜೆಡಿಯು ಸೇರಿದಂತೆ 26 ಪಕ್ಷಗಳ ಮುಖಂಡರು, ಪಕ್ಷದ ಹಿರಿಯ ನಾಯಕರು ಭಾಗವಹಿಸಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಈ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ `INDIAʼ ಎಂದು ಹೆಸರಿಟ್ಟಿದ್ದಾಗಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಬಹಿರಂಗಪಡಿಸಿದ್ದರು. ಈ ಹೆಸರನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚಿಸಿದಂತಿದೆ. ಈ ಬಗ್ಗೆ ಎಲ್ಲ ನಾಯಕರು ಗಹನವಾಗಿ ಚರ್ಚಿಸಿ ಒಮ್ಮತಕ್ಕೆ ಒಪ್ಪಿಗೆ ಸೂಚಿಸಿದ್ದು, ಆದರೆ ಬಿಹಾರ ಸಿಎಂ ನಿತೀಶ್ ಕುಮಾರ್ `INDIAʼ ಹೆಸರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ಮೈತ್ರಿಯ ಹೆಸರನ್ನು ಕಾಂಗ್ರೆಸ್ ತನ್ನೊಂದಿಗೆ ಯಾವುದೇ ರೀತಿಯಲ್ಲಿ ಚರ್ಚಿಸಿಲ್ಲ ಎಂದು ಹೇಳಿದರು.

‘ಈ ಇಂಡಿಯಾ’ ಹೆಸರಿನಲ್ಲಿ ಎನ್‌ಡಿಎ ಪದಗಳೂ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಿತೀಶ್ ಕುಮಾರ್, ಮೈತ್ರಿಕೂಟಕ್ಕೆ ಆ ಹೆಸರನ್ನು ಹೇಗೆ ಇಡುತ್ತೀರಿ ಎಂದು ಸಭೆಯಲ್ಲಿ ಪ್ರಶ್ನಿಸಿದ್ದಾರೆ. ನಿತೀಶ್ ಜೊತೆಗೆ ಎಡಪಕ್ಷಗಳ ನಾಯಕರು ಕೂಡ ಭಾರತದ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿ ಮತ್ತೊಂದು ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!