ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ಬಿಹಾರದಲ್ಲಿ ಆರ್ಜೆಡಿ-ಜೆಡಿಯು ಮೈತ್ರಿ ಕುಸಿದಿದೆ.
ರಾಜಭವನಕ್ಕೆ ಭೇಟಿ ನೀಡಿದ ನಂತರ ನಿತೀಶ್ ಕುಮಾರ್ ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕೀಯದಲ್ಲಿ ಇದ್ದ ಅನಿಶ್ಚಿತತೆ ಇಂದು ಕೊನೆಗೊಂಡಿದೆ. ಏಕೆಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಜೆ ವೇಳೆಗೆ ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲಿದ್ದಾರೆ.