October 15, 2026
Thursday, October 15, 2026
spot_img

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ಇಂದು ರಾಜೀನಾಮೆ ನೀಡಿದ್ದಾರೆ.

ತಮ್ಮ ಕೊನೆಯ ಕ್ಯಾಬಿನೆಟ್ ಸಭೆ ನಡೆಸಿದ ನಿತೀಶ್,ಹೊಸ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದರು. ತಮ್ಮಿಂದ ಅಧಿಕಾರ ವಹಿಸಿಕೊಳ್ಳಲಿರುವ ಹೊಸ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಬಳಿಕ ಬಿಹಾರದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ನಾಳೆಯಿಂದ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಬಿಜೆಪಿಯ ಅಭ್ಯರ್ಥಿ ಸಿಎಂ ಆಗುವ ಸಾಧ್ಯತೆ ಹೆಚ್ಚಾಗಿದೆ.

ನಿತೀಶ್ ಕುಮಾರ್ ಅತೀ ಹೆಚ್ಚು ಕಾಲ ಬಿಹಾರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಏಪ್ರಿಲ್ 9 ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ 2 ದಶಕಗಳ ಬಳಿಕ ಮತ್ತೆ ದೆಹಲಿಯತ್ತ ಮುಖಮಾಡುತ್ತಿದ್ದಾರೆ .

Must Read