ಎಂಟನೇ ಬಾರಿಗೆ ಬಿಹಾರ ಗದ್ದುಗೆ ಏರಿದ ನಿತೀಶ್ ಕುಮಾರ್: ಉಪ ಮುಖ್ಯಮಂತ್ರಿಯಾಗಿ ತೇಜಸ್ವಿ ಪ್ರಮಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಇಂದು ಮಹಾ ಘಟಬಂಧನ್‌ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.

ಇದೇ ಸಂದರ್ಭ ಉಪ ಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!