ಹೊಸದಿಗಂತ ಡಿಜಿಟಲ್ ಡೆಸ್ಕ್
ಆಡಳಿತಾರೂಢ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಯು ನೇತೃತ್ವದ ಎನ್‌ಡಿಎ 20 ವರ್ಷಗಳ ಆಳ್ವಿಕೆಯ ಹೊರತಾಗಿಯೂ ಬಿಹಾರದ ರೈತರು ಇನ್ನೂ ಬಡವರಾಗಿಯೇ ಇದ್ದಾರೆ ಎಂದ ತೇಜಸ್ವಿ ಯಾದವ್, ಕೇಂದ್ರವು ಬಿಹಾರದಲ್ಲಿ ಭ್ರಷ್ಟ ನಾಯಕರು ಮತ್ತು ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ವಿರೋಧ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅವರು ಸ್ವಚ್ಛ ಸರ್ಕಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

