Me too case: ನಿರಪರಾಧಿ ಅಂತ ಪ್ರೂವ್‌ ಮಾಡ್ಕೊಳಕ್ಕೆ ಏನಾದ್ರೂ ಮಾಡ್ತೀನಿ ಎಂದ ನಿವಿನ್‌ ಪೌಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ನಂಬಿಸಿ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಎರ್ನಾಕುಲಂ ಜಿಲ್ಲೆಯ ನೇರ್ಯಮಂಗಲಂ ನಿವಾಸಿ ಯುವತಿ ಊನ್ನುಕ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಟ ನಿವಿನ್ ಪೌಲಿ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ವಿರುದ್ಧದ ಆರೋಪ ನಿರಾಧಾರ. ನಕಲಿ ದೂರು ನೀಡಿ ಎಫ್‌ಐಆರ್‌ ದಾಖಲಿಸಿದ್ದಾರೆ. ನನ್ನ ವಿರುದ್ಧ ದೂರು ನೀಡಿರುವ ಮಹಿಳೆಯ ಪರಿಚಯವೂ ನನಗಿಲ್ಲ, ಆಕೆಯೊಂದಿಗೆ ಮಾತನ್ನೂ ಆಡಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಯಾವ ಹಂತಕ್ಕೆ ಹೋಗುವುದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!