ಮೂರು ಮಾದರಿಯಲ್ಲೂ ನಂ.1: ವಿಶೇಷ ಸಾಧನೆಗೈದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಸಾಧನೆ ಮಾಡಿದೆ.
ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಇದೀಗ ವಿಶ್ವದ ನಂಬರ್ 1 ಟೆಸ್ಟ್ ತಂಡ ಎನಿಸಿಕೊಂಡಿದೆ.

ಭಾರತ ಈ ಟೆಸ್ಟ್ ಸರಣಿಯನ್ನು 4-0 ಅಂತರದಿಂದ ಗೆದ್ದರೆ, ಅದು ನಂಬರ್ 1 ಸ್ಥಾನದಲ್ಲಿ ಉಳಿಯುತ್ತದೆ. ಹಾಗೆಯೇ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿಯಲಿದೆ.ಅದೇ ಸಮಯದಲ್ಲಿ ಆಸ್ಟ್ರೇಲಿಯ ಮತ್ತೆ ನಂಬರ್ 1 ಸ್ಥಾನಕ್ಕೆ ಬರಲು ಸರಣಿ ಗೆಲ್ಲಲೇಬೇಕು. ಈ ಸರಣಿಯಲ್ಲಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದರೆ ಮತ್ತೊಮ್ಮೆ ಟೆಸ್ಟ್ ತಂಡವಾಗಿ ನಂ.1 ಸ್ಥಾನಕ್ಕೇರಲಿದೆ. ಮತ್ತೊಂದೆಡೆ, ಈ ಸರಣಿ ಡ್ರಾಗೊಂಡರೆ, ಭಾರತ ಇನ್ನೂ ನಂಬರ್ 1 ಸ್ಥಾನವನ್ನು ಉಳಿಸಿಕೊಳ್ಳಲಿದೆ.

ಇನ್ನು ಏಕದಿನ ಮಾದರಿಯಲ್ಲಿ 114 ರೇಟಿಂಗ್ ಹೊಂದಿರುವ ಟೀಂ ಇಂಡಿಯಾ 3572 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲೂ 267 ರೇಟಿಂಗ್ ಹೊಂದಿರುವ ರೋಹಿತ್ ಪಡೆ 18,445 ಅಂಕಗಳೊಂದಿಗೆ ನಂ.1 ಪಟ್ಟವನ್ನು ಅಲಂಕರಿಸಿದೆ. ಈ ಮೂಲಕ ಟೆಸ್ಟ್, ಏಕದಿನ ಪಂದ್ಯ ಹಾಗೂ ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದು, ರೋಹಿತ್ ಶರ್ಮಾ ನಾಯಕತ್ವದ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!