ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಸಿಎಂ ವಿರುದ್ಧ ವ್ಯಂಗ್ಯವಾಡಿದೆ.
ಭ್ರಷ್ಟಾಚಾರದಲ್ಲೂ ಸಿಎಂ ಸಿದ್ದರಾಮಯ್ಯ A1 ಭಂಡತನದಲ್ಲಿ A1 ವಂಚನೆ A1 ಸುಳ್ಳು ಹೇಳುವುದರಲ್ಲಿ A1
ಈಗ ಎಫ್‌ಐಆರ್‌ನಲ್ಲಿ A1 ಎಂದು ಲೇವಡಿ ಮಾಡಿದೆ.
ಹಗರಣದ ಮಾಸ್ಟರ್ ಮೈಂಡ್ ಶ್ರೀ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಹೇಳಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತದಲ್ಲಿ ವಿವಿಧ ಸೆಕ್ಷನ್‌ಗಳಲ್ಲಿ ಎಫ್‌ಐಆರ್ ದಾಖಲಾಗಿದೆ.