ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಸ್ವಾಭಿಮಾನ ಸಮಾವೇಶಕ್ಕೆ ಯಾವುದೇ ಕಾರ್ಯಕರ್ತನ ವಿರೋಧವಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕಮಾರ್ ಬಣದ ವಿರೋಧವಿದೆ ಅಂತ ಹೇಳುಲಾಗುತ್ತಿದೆ, ಅದರೆ ಕೆಪಿಸಿಸಿ ಅಧ್ಯಕ್ಷರೇ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ, ಇದು ಯಾವ ಕಾರಣಕ್ಕೂ ಸಿದ್ದರಾಮಯ್ಯ ಅವರ ವೈಯಕ್ತಿಕ ಕಾರ್ಯಕ್ರಮವಲ್ಲ ಎಂದು ಲಕ್ಷ್ಮಣ್ ತಿಳಿಸಿದ್ದಾರೆ.