ನಮ್ಮ ಸಹೋದರರ ಮೇಲೆ ಯಾವುದೇ ಕೋಪ, ದ್ವೇಷ ಇಲ್ಲ: ತಮಿಳುನಾಡಿನ ಕುರಿತು ಡಿಕೆಶಿ ಮಾತು !

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವಡಿಕೆ ಶಿವಕುಮಾರ್, ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ.ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣ ತಮ್ಮಂದಿರಂತೆ ಎಂದಿದ್ದಾರೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು.
ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ ಎಂದು ತಿಳಿಸಿದ್ದಾರೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ.ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!