ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರ ಬದ್ಧವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ 2,50,000 ಹುದ್ದೆಗಳು ನೇಮಕವಾಗಬೇಕಿದೆ. ಪೊಲೀಸ್ ಇಲಾಖೆಯಲ್ಲಿ 18,000 ಹುದ್ದೆಗಳು ಖಾಲಿ ಇವೆ. ಕಾರಾಗೃಹದಲ್ಲಿ ಶೇ. 38ರಷ್ಟು ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ನಡೆಯಬೇಕಿದೆ. ಒಳ ಮೀಸಲಾತಿ ತೀರ್ಮಾನ ಆಗುವವರೆಗು ನೇಮಕಾತಿ ಹಾಗೂ ಮುಂಬಡ್ತಿ ನೀಡುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ